ಬೆಂಗಳೂರು: ಪಂಚರಾಜ್ಯ ಚುನಾವಣೆಗಾಗಿ ಇಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಅಂಬಿಕಾಪತಿ, ಬಿಲ್ಡರ್ ಸಂತೋಷ್ ಮನೆಯಲ್ಲಿ ಸಿಕ್ಕ ಹಣವೇ ಇದಕ್ಕೆಲ್ಲ ಸಾಕ್ಷಿ ಎಂದು ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ಮುಕ್ತ ಸರ್ಕಾರ ಅಂತಾರೆ. ಆದರೆ ಅವರ ಮೂಗಿನ ಕೆಳಗೆ ಭ್ರಷ್ಟಾಚಾರ ನಡೆಯುತ್ತಿದೆ. ದಸರಾ ಕಾರ್ಯಕ್ರಮಕ್ಕೂ ಕಮಿಷನ್ ಕೇಳಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ 40, 42 ಕೋಟಿ ಪತ್ತೆಯಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ. 98 ಜನ ಬೇನಾಮಿ ಹೆಸರು ಹೊರ ಬರಬೇಕು ಎಂದು ಹೇಳಿದ್ದಾರೆ.
ಎಂಪಿ ಚುನಾವಣೆಗೆ 2000 ಕೋಟಿ ಕೊಡುತ್ತೇನೆ ಎನ್ನುವುದು ಚರ್ಚೆಯಾಗುತ್ತಿದೆ. ಬ್ರ್ಯಾಂಡ್ ಬೆಂಗಳೂರು ಎಂದರೆ ಭ್ರಷ್ಟ ಬೆಂಗಳೂರನ್ನಾಗಿ ಮಾಡಲು ಹೊರಟಿದ್ದಾರೆ. ಬಿಲ್ಡಿಂಗ್ ಪ್ಲಾನ್ ಮಾಡಲು ಒಂದು ಅಡಿ 100 ರೂ ಕೊಡಬೇಕು. ಎಲ್ ಎನ್ ಟಿ ಅವರಿಗೆ ನೀರನ್ನೇ ಬಂದ್ ಮಾಡಿದ್ದಾರೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ.