ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಈ ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದೆ. ಇದರಿಂದಾಗಿ ತಾಪಮಾನ ಏರಿಕೆಯಾಗುತ್ತಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಕೊಪ್ಪಳ, ರಾಯಚೂರು, ಗದಗ, ಧಾರವಾಡ, ಬೆಳಗಾವಿಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.