HomeKarnatakaಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ವಿಕೃತಿ ಮೆರೆದ ಪ್ರಕರಣ : 13 ಜನರ...

ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ವಿಕೃತಿ ಮೆರೆದ ಪ್ರಕರಣ : 13 ಜನರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರಹಾಕಿ ಗ್ರಾಮಸ್ಥರು ನಡು ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾದ ಮಲ್ಲಾಪುರ ಪಿಜಿ ನಗರದ ಜನರು ಮಹಿಳೆಯೊಬ್ಬರಿಗೆ ಚಪ್ಪಲಿ ಹಾರ ಹಾಕಿ ಮಧ್ಯರಾತ್ರಿ ನಡುರಸ್ತೆಯಲ್ಲಿ ಮೆರವಣಿಗೆ ಮಾಡಿ, ಮಹಿಳೆ ವಿರುದ್ಧ ಘೋಷಣೆ ಕೂಗಿದ್ದರು. ಶ್ರೀದೇವಿ ಎಂಬ ಮಹಿಳೆಯನ್ನು ಘಟಪ್ರಭಾ ಮೃತ್ಯುಂಜಯ ಸರ್ಕಲ್ ನಲ್ಲಿ ಈ ರೀತಿ ಮೆರವಣಿಗೆ ಮಾಡಿದ್ದಲ್ಲದೇ ಮಹಿಳೆಯನ್ನು ಥಳಿಸಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿತ್ತು. ಮಹಿಳೆಯ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ ಪಿ ಭೀಮಾಶಂಕರ್ ಹೇಳಿಕೆ ನೀಡಿದ್ದಾರೆ.

ಆಕೆ ಯುವಕರನ್ನು ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡುತ್ತಿದ್ದಳು ಎಂದು ಕೆಲ ಮಹಿಳೆಯರು, ಪಿಜಿ ನಗರವಾಸಿಗಳು ಆಕೆಯ ಮನೆಗೆ ಹೋಗಿ ಪ್ರಶ್ನಿಸಿದ್ದಾರೆ. ಈ ವೇಳೆ ಮಹಿಳೆಯರನ್ನು ಶ್ರೀದೇವಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಳಂತೆ. ಇದರಿಂದ ಸಿಟ್ಟಿಗೆದ್ದ ಮಹಿಳೆಯರು ಆಕೆಯನ್ನು ಮನೆಯಿಂದ ಎಳೆದು ತಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು ಎನ್ನಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular