HomeKarnatakaBIG NEWS: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ

BIG NEWS: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಿಎಂ ನಿವಾಸಕ್ಕೆ ಭದ್ರತೆ ನಿಯೋಜಿಸಲಾಗಿದೆ.

ದಸರಾ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಮೈಸೂರುನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಸಾರ್ವಜನಿಕರು ಸರತಿ ಸಾಲಿನಲ್ಲಿ ಆಗಮಿಸಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸಿಪಿ ಗಜೇಂದ್ರ ನೇತೃತ್ವದಲ್ಲಿ ಸಿಎಂ ನಿವಾಸಕ್ಕೆ ಭದ್ರತೆ ನೀಡಲಾಗಿದ್ದು, 1 ಸಿಎಆರ್, 1 ಕೆ ಎಸ್ ಆರ್ ಪಿ ತುಕಡಿ, ಸಬ್ ಇನ್ಸ್ ಪೆಕ್ಟರ್ ಹಾಗೂ ಎ ಎಸ್ ಐ ಸೇರಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular