ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿಸುದ್ದಿನೀಡಿದ್ದು, ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16 ರಿಮದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.
ಅ.16 ರಿಂದ 18 ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ
ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ
ಅ. 19 ರಿಂದ 21 ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ
ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ
ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿದೆ.