ಬೆಂಗಳೂರು : ನಾವು ಬಿಜೆಪಿಗೆ ಬೆಂಬಲ ನೀಡಲ್ಲ, ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಘೋಷಣೆ ಮಾಡಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಜೆಡಿಎಸ್ ಒರಿಜಿನಲ್ ನಮ್ಮದೇ , ನಾವು ಬಿಜೆಪಿಗೆ ಸಪೋರ್ಟ್ ಮಾಡಲ್ಲ ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಸಿ.ಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಲವಾರು ಎಂಎಲ್ ಗಳು ನನ್ನ ಜೊತೆ ಇದ್ದಾರೆ, ಬಿಜೆಪಿಯನ್ನು ಸೋಲಿಸಬೇಕಿದೆ, ನಾನು ಪ್ರತ್ಯೇಕವಾಗಿ ಕೋರ್ ಕಮಿಟಿಯನ್ನು ರಚನೆ ಮಾಡುತ್ತೇನೆ ಎಂದು ಹೇಳುವ ಮೂಲಕ ಇಬ್ರಾಹಿಂ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಹಾಗೆಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ಸೆಡ್ಡು ಹೊಡೆದಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಈ ರೀತಿ ಹೇಳಿಕೆ ನೀಡಿದ್ದಾರೆ. ನನಗೆ ಕಾಂಗ್ರೆಸ್ ಹೈಕಮಾಂಡ್, ಎಎಪಿ, ಎನ್ಸಿಪಿಗಳಿಂದ ಕರೆಗಳು ಬಂದಿವೆ ಎಂದು ಇಬ್ರಾಹಿಂ ಇತ್ತೀಚೆಗೆ ಹೇಳಿಕೊಂಡಿದ್ದರು, ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ದೇವೇಗೌಡರನ್ನು ಭೇಟಿ ಮಾಡುವುದಾಗಿ ಹೇಳಿದ್ದರು. ಇದೀಗ ಕಾಂಗ್ರೆಸ್ ಇಬ್ರಾಹಿಂ ಬೆಂಬಲ ಘೋಷಿಸಿದ್ದು, ಸಿಎಂ ಇಬ್ರಾಹಿಂ ನಡೆ ಕುತೂಹಲ ಮೂಡಿಸಿದೆ.