ಚಿತ್ರದುರ್ಗ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಪತ್ತೆಯಾದ ಕೋಟಿ ಕೋಟಿ ಹಣದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಗೆ ಸೇರಿದ್ದು ಎಂಬುದು ಹಾಸ್ಯಾಸ್ಪದ ಎಂದು ಕಿಡಿಕಾರಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂದಿನ ಚುನಾವಣೆಗಾಗಿ ಗುತ್ತಿಗೆದಾರರ ಬಳಿ ಹಣ ಸಂಗ್ರಹ ನಡೆದಿದೆ. ಕಾಂಗ್ರೆಸ್ ನವರು ಹೈಕಮಾಂಡ್ ಗೆ ಹಣ ನೀಡಲು ಪೈಪೋಟಿ ನಡೆಸಿದ್ದಾರೆ ಎಂದು ಹೇಳಿದರು.
ಭದ್ರಾ ಯೋಜನೆಗೆ 1950 ಕೋಟಿ ಹಣ ಬಾಕಿ ಉಳಿಸಿಕೊಳ್ಳಲಾಗಿದೆ. ನೇರ ರೈಲು ಮಾರ್ಗದ ಭೂ ಸ್ವಾಧೀನಕ್ಕೆ ಹಣ ಬಿಡುಗಡೆ ಮಾಡಿಲ್ಲ. ಕಮಿಷನ್ ಬೇಕೆಂದು ಕರೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ. ಚುನಾವಣೆಗೆ ಕಾಂಗ್ರೆಸ್ ಫಂಡಿಂಗ್ ಮಾಡುತ್ತಿರುವುದು ಜಗಜ್ಜಾಹೀರಾಗಿದೆ ಎಂದು ಆರೋಪಿಸಿದರು.
ಸರ್ಕಾರ ದಿವಾಳಿ ಆಗಿದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.