HomeKarnatakaಶಾರ್ಟ್ ಸರ್ಕ್ಯೂಟ್ ನಿಂದ 7 ರೈತರಿಗೆ ಸೇರಿದ 26 ಎಕರೆ ಕಬ್ಬು ಸುಟ್ಟು ಭಸ್ಮ

ಶಾರ್ಟ್ ಸರ್ಕ್ಯೂಟ್ ನಿಂದ 7 ರೈತರಿಗೆ ಸೇರಿದ 26 ಎಕರೆ ಕಬ್ಬು ಸುಟ್ಟು ಭಸ್ಮ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 26 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಿರಹಟ್ಟಿಯ 7 ರೈತರಿಗೆ ಸೇರಿದ ಕಬ್ಬು ಬೆಳೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ತಗುಲಿದ ಬೆಂಕಿ ಅಕ್ಕಪಕ್ಕದ ಕಬ್ಬಿನ ಗದ್ದೆಗಳಿಗೆ ವ್ಯಾಪಿಸಿದ್ದು, ಬೆಂಕಿ ಕೆನ್ನಾಲಗೆಯಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 20 ಲಕ್ಷ ರೂ.ಗೂ ಅಧಿಕ ಮೌಲ್ಯದ ಹಾನಿಯಾಗಿದೆ. ಮಳೆ ಇಲ್ಲದೇ ಮೊದಲೇ ಸಂಕಷ್ಟದಲ್ಲಿದ್ದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.  ಬೆಂಕಿಯಿಂದ ಕಬ್ಬು ಬೆಳೆ ಹಾನಿಗೀಡಾಡದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular