HomeIndiaಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಟಿವಿ ನೋಡುತ್ತಿರುವುದಕ್ಕೆ ತಾಯಿ ಗದರಿಸಿದ್ದೇ ಆಕೆಯ ದುಡುಕಿನ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ.

18 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ರಾತ್ರಿ ಕೋಣೆಗೆ ಹೋಗಿ ಒಳಗಿನಿಂದ ಚಿಲಕ ಹಾಕಿದ್ದಾಳೆ. ನಂತರ ದುಪಟ್ಟಾ ತೆಗೆದುಕೊಂಡು ಸೀಲಿಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿಯನ್ನು ಮನಿಷಾ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಕೋಣೆಯಿಂದ ಹೊರಗೆ ಬಾರದೆ ಇದ್ದಾಗ ಮನೆಯವರು ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಉಭಾನ್ ಪೊಲೀಸ್ ಠಾಣೆ ಎಸ್ಹೆಚ್ಒ ಎಂ.ಕೆ. ಶ್ರೀವಾಸ್ತವ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಯುವತಿ ನೇಣು ಬಿಗಿದುಕೊಂಡಿದ್ದ ಕೊಠಡಿಯಿಂದ ಆತ್ಮಹತ್ಯೆ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆತ್ಮಹತ್ಯೆ ಪತ್ರದಲ್ಲಿ ತನ್ನ ತಾಯಿಯಿಂದ ನಿಂದಿಸಿದ್ದರಿಂದ ತೀವ್ರ ಹೆಜ್ಜೆ ಇಡುತ್ತಿರುವುದಾಗಿ ಬರೆದಿದ್ದಾಳೆ. ಭಾನುವಾರ ತಡರಾತ್ರಿ ಮನೀಶಾ ಟಿವಿ ನೋಡುತ್ತಿದ್ದಳು, ಇದರಿಂದ ಕೋಪಗೊಂಡ ಆಕೆಯ ತಾಯಿ ಆಕೆಯನ್ನು ಗದರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular