ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಮುಂದಿನ 24 ಗಂಟೆಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಒಣ ಹವೆ ಇರಲಿದೆ ಎಂದು ಹೇಳಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು, ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.