ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಸೋಮವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಆಗಿದೆ.
ಚಿನ್ನದ ದರ 10 ಗ್ರಾಂ ಗೆ 350 ರೂಪಾಯಿಯಷ್ಟು ಕಡಿಮೆಯಾಗಿದ್ದು 60,150 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 300 ರೂಪಾಯಿ ಇಳಿಕೆಯಾಗಿದ್ದು, 74,000 ರೂ.ಗೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕಡಿಮೆಯಾಗಿದ್ದು, ಅದರ ಪರಿಣಾಮ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ದರ 1912 ಡಾಲರ್ ನಂತೆ ಮಾರಾಟವಾಗಿದೆ.