ಪುಣೆ :ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟ್ರಕ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಟ್ರಕ್ ಹೊತ್ತಿ ಉರಿದಿದೆ. ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಮೃತ ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.