ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಂದು ಅವಕಾಶ ನೀಡಿದ್ದು, ಅ. 16 ರಿಂದ 21 ರವರೆಗೆ ಹಲವು ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಧಿ ವಿಸ್ತರಿಸಿದೆ.
ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಅ.16 ರಿಂದ 18 ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ
ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ
ಅ. 19 ರಿಂದ 21 ರವರೆಗೆ ಈ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ
ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಮೊದಲು ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/home ಭೇಟಿ ನೀಡಿ
ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
ಹೊಸ ಪೇಜ್ ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ.