 ಬೆಂಗಳೂರು : 6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : 6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲವರು ಕಳೆದ 6 ತಿಂಗಳಿನಿಂದ ರೇಷನ್ ಪಡೆದಿಲ್ಲ ಎಂಬುದು ತಿಳಿದು ಬಂದಿದ್ದು, ಇಂತಹವರಿಗೆ ಆಹಾರ ಇಲಾಖೆ ಶಾಕ್ ನೀಡಿದ್ದು, ರೇಷನ್ ಪಡೆಯದವರ ರೇಷನ್ ಕಾರ್ಡ್ ಅಮಾನತು ಮಾಡಲು ಆಹಾರ ಇಲಾಖೆ ನಿರ್ಧರಿಸಿದೆ. ಯಾರು ಪ್ರತಿ ತಿಂಗಳು ರೇಷನ್ ಪಡೆಯುದಿಲ್ಲವೋ ಅಂತಹವರ ಕಾರ್ಡ್ ರದ್ದತಿಗೆ ಆಹಾರ ಇಲಾಖೆ ಮುಂದಾಗಿದೆ.
ಸದ್ಯ, ಆಹಾರ ಇಲಾಖೆ ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16 ರಿಂದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.
ಅ.16 ರಿಂದ 18 ರವರೆಗೆ ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರದಲ್ಲಿ ಅವಕಾಶ ನೀಡಲಾಗಿದೆ.
ಅ. 19 ರಿಂದ 21 ರವರೆಗೆ ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿದೆ.

 
		 
		 
		 
		 Loading ...
 Loading ... 
		 
		 
		