alex Certify BIG NEWS : ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ : ಆಸ್ಪತ್ರೆಗೆ ಬರಬೇಡಿ ಎಂದ ಮಾಜಿ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ : ಆಸ್ಪತ್ರೆಗೆ ಬರಬೇಡಿ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದು, ಲಘು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದೀಗ ತಮ್ಮ ಆರೋಗ್ಯದ ಕುರಿತು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

‘’ಆತ್ಮೀಯರೇ, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ. ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು. ಇಂತಿ ನಿಮ್ಮ, ಬಸವರಾಜ ಬೊಮ್ಮಾಯಿ’’ ಎಂದು ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...