ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಲಾಗಿದೆ ಎನ್ನಲಾದ ನಕಲಿ ಪತ್ರ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ದೂರು ದಾಖಲಿಸಿದ್ದಾರೆ.
ಜೆ.ಸಿ. ನಗರ ಠಾಣೆಗೆ ದೂರು ನೀಡಿದ್ದು, ನಕಲಿ ಪತ್ರ ವೈರಲ್ ಹಿನ್ನೆಲೆ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ವೈಯಕ್ತಿಕವಾಗಿ ಧಕ್ಕೆ ಆಗಿದೆ. ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.