ನವದೆಹಲಿ: 2008 ರಲ್ಲಿ ನಡೆದ ದೆಹಲಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐದು ಆರೋಪಿಗಳಿಗೆ ದೆಹಲಿ ನ್ಯಾಯಾಲಯ ಬುಧವಾರ ಶಿಕ್ಷೆ ವಿಧಿಸಿದೆ.
ಹೆಡ್ಲೈನ್ಸ್ ಟುಡೇ ಸುದ್ದಿ ವಾಹಿನಿಯಲ್ಲಿ ಪತ್ರಕರ್ತೆಯಾಗಿದ್ದ ವಿಶ್ವನಾಥನ್ ಅವರನ್ನು 2008ರ ಸೆಪ್ಟೆಂಬರ್ ನಲ್ಲಿ ಕಚೇರಿಯಿಂದ ಮನೆಗೆ ತೆರಳುತ್ತಿದ್ದಾಗ ಕಾರಿನಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್, ಬಲ್ಜೀತ್ ಮಲಿಕ್ ಮತ್ತು ಅಜಯ್ ಸೇಥಿ ಅವರನ್ನು ಸಾಕೇತ್ ನ್ಯಾಯಾಲಯ ದೋಷಿ ಎಂದು ಘೋಷಿಸಿ ತೀರ್ಪು ನೀಡಿದೆ.
ಯುವ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಅವರು ಸೆಪ್ಟೆಂಬರ್ 30, 2008 ರಂದು ದಕ್ಷಿಣ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದರು, ಆರಂಭದಲ್ಲಿ ಇದು ಕಾರು ಅಪಘಾತ ಎಂದು ಹೇಳಲಾಗಿತ್ತು.