HomeKarnatakaಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಸತಿ ಶಾಲೆ -ಕಾಲೇಜುಗಳ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಸತಿ ಶಾಲೆ -ಕಾಲೇಜುಗಳ ಖಾಲಿ ಹುದ್ದೆಗಳ ಭರ್ತಿಗೆ ಅನುಮೋದನೆ

ಬೆಂಗಳೂರು: ವಸತಿ ಶಾಲೆ -ಕಾಲೇಜುಗಳ 808 ಹುದ್ದೆ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಉನ್ನತೀಕರಣ, ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ದ್ವಿಗುಣ, ಹೊಸದಾಗಿ 10 ವಸತಿ ಶಾಲೆ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 708 ಹೊರಗುತ್ತಿಗೆ, 100 ಕಾಯಂ ಹುದ್ದೆಗಳು ಸೇರಿ 808 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

10 ಪ್ರಾಂಶುಪಾಲರು, 248 ಉಪನ್ಯಾಸಕರು, 60 ಶಿಕ್ಷಕರು ಸೇರಿ 808 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. 10 ಹೊಸ ಮೊರಾರ್ಜಿ ದೇಸಾಯಿ ಶಾಲೆಗೆ 100 ಹುದ್ದೆಗಳನ್ನು ಕೆ.ಪಿ.ಎಸ್.ಸಿ. ಮೂಲಕ ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular