ಬೆಂಗಳೂರು: ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ಸರ್ಕಾರ ರಿಲ್ಯಾಕ್ಸ್ ನೀಡಿದೆ. ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ನಂತರ ಸಚಿವ ಹೆಚ್.ಕೆ. ಪಾಟೀಲ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ಬಿಲ್ ಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆ ಮೂಲಕ ವಿಧೇಯಕಕ್ಕೆ ಅನುಮೋದನೆ ಪಡೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವೈದ್ಯರಿಗೆ ಕಡ್ಡಾಯ ಗ್ರಾಮೀಣ ಸೇವೆ ನಿಯಮ ಬದಲಾವಣೆಗೆ ತೀರ್ಮಾನಿಸಲಾಗಿದೆ. ಖಾಲಿ ಹುದ್ದೆಗಳಿಗೆ ಅಗತ್ಯವಿರುವಷ್ಟು ಮಾತ್ರ ಕಡ್ಡಾಯ ಗ್ರಾಮೀಣ ಸೇವೆ ಇರಲಿದೆ ಎಂದು ಹೇಳಲಾಗಿದೆ.