ಬೆಂಗಳೂರು : ರಾಜ್ಯ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ಸಹಾಯಧನ ಸೌಲಭ್ಯ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು,ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುವ ರೂ. 2000 ಮಾಸಿಕ ಸಹಾಯಧನ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ನೀಡಲು ಅನುಮೋದನೆ ನೀಡಲಾಗಿದೆ.
ರಾಜ್ಯದಲ್ಲಿ ಗ್ರಾಮೀಣ ಭಾಗದ ಜನರಿಗೆ ಸ್ವಂತ ನ್ಯಾಯ ಒದಗಿಸುವ ಹಾಗೂ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಸಂಬಂಧ ಪಟ್ಟಣಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಪಂಚಾಯಿತಿ ಮಟ್ಟದಲ್ಲೇ 100 ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಮಾಡಲಾಗಿದೆ.