HomeKarnatakaಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಕೂಡ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ತಿಂಗಳು ಕೆಆರ್ ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವ ಬಗ್ಗೆ ಡಿ.ಕೆ. ಶಿವಕುಮಾರ್ ಗೆ ಪೂರ್ಣಿಮಾ ಶ್ರೀನಿವಾಸ್ ಭರವಸೆ ನೀಡಿದ್ದರು. ಅಂತೆಯೇ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಅವರ ಕಾಂಗ್ರೆಸ್ ಸೇರ್ಪಡೆಗೆ ಕಾಡುಗೊಲ್ಲ ಸಮುದಾಯದ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ಪಡೆದುಕೊಳ್ಳದೆ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular