ಬೆಂಗಳೂರು: ನಾಡಿನೆಲ್ಲೆಡೆ ದಸರಾ, ನವರಾತ್ರಿ ಸಡಗರ ಸಂಭ್ರಮ ಮನೆ ಮಾಡಿದೆ. ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೊಸ ಯೋಜನೆ ಜಾರಿಗೆ ಮುಂದಾಗಿದೆ.
ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬಕ್ಕೆ ಬಿಎಂಟಿಸಿ ಹೊರ ಜಿಲ್ಲೆಗಳಿಗೂ ಬಸ್ ಸೌಲಭ್ಯ ಕಲ್ಪಿಸಲು ತೀರ್ಮಾನಿಸಿದೆ. ಅಕ್ಟೋಬರ್ 23, ಅಕ್ಟೋಬರ್ 24ರಂದು ದಸರಾ ಹಬ್ಬದ ಪ್ರಯುಕ್ತ ಹೊರ ಜಿಲ್ಲೆಗಳಿಗೂ ಬಿಎಂಟಿಸಿ ಬಸ್ ಗಳು ಸಂಚರಿಸಲಿವೆ.
ಹಬ್ಬದ ಸಂದರ್ಭದಲ್ಲಿ ಬೆಂಗಳೂರು ನಗರದಿಂದ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ ಹೊರ ಜಿಲ್ಲೆಗಳಿಗೂ ಬಸ್ ಓಡಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಷ್ಟು ದಿನ ಬೆಂಗಳೂರಿನಲ್ಲಿ ಮಾತ್ರ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಗಳು ಈಗ ವಿವಿಧ ಜಿಲ್ಲೆಗಳಲ್ಲಿಯೂ ಸಂಚರಿಸಲಿದೆ ಎಂಬುದು ವಿಶೇಷ.