‘ಟಾಮ್ ಅಂಡ್ ಜೆರ್ರಿ’ ಖ್ಯಾತಿಯ ನಿಶ್ಚಿತ್ ಕೊರೋಡಿ ಅಭಿನಯದ ‘supplier ಶಂಕರ’ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನಲಲ್ಲಿ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ನಿಶ್ಚಿತ್ ಮಾಸ್ ಲುಕ್ ಗೆ ಫಿದಾ ಆಗಿದ್ದಾರೆ.
ರಂಜಿತ್ ಸಿಂಗ್ ರಜಪೂತ್ ನಿರ್ದೇಶನದ ಈ ಚಿತ್ರದಲ್ಲಿ ನಿಶ್ಚಿತ್ ಕೊರೋಡಿ ಜೊತೆ ದೀಪಿಕಾ ಆರಾಧ್ಯ ನಾಯಕಿಯಾಗಿ ಅಭಿನಯಿಸಿದ್ದು, ಇನ್ನುಳಿದಂತೆ ಗೋಪಾಲಕೃಷ್ಣನ್ ದೇಶಪಾಂಡೆ, ನವೀನ್ ಡಿ, ಜ್ಯೋತಿ, ವಿಜಯ್ ವಿಶ್ವನಾಥ್ ಬಣ್ಣ ಹಚ್ಚಿದ್ದಾರೆ.
ತ್ರಿನೇತ್ರ ಫಿಲಂಸ್ ಬ್ಯಾನರ್ ನಲ್ಲಿ ಚಂದ್ರಶೇಖರ್ ಮತ್ತು ನಾಗೇಂದ್ರ ಸಿಂಗ್ ನಿರ್ಮಾಣ ಮಾಡಿದ್ದಾರೆ. ಸತೀಶ್ ಕುಮಾರ್ ಛಾಯಾಗ್ರಹಣವಿದ್ದು, ಸತೀಶ್ ಚಂದ್ರಯ್ಯ ಸಂಕಲನವಿದೆ. ಆರ್ ಬಿ ಭರತ್ ಸಂಗೀತ ಸಂಯೋಜನೆ ನೀಡಿದ್ದಾರೆ.