HomeKarnatakaರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆ ಕಡ್ಡಾಯ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು...

ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆ ಕಡ್ಡಾಯ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ಸರ್ಕಾರ ಆದೇಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಸಂದರ್ಭದಲ್ಲಿ ರಾಜ್ಯೋತ್ಸವ ಆಚರಿಸುವಾಗ ಐದು ಕನ್ನಡ ಗೀತೆಗಳನ್ನು ಹಾಡಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 1ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ ಹಾಡಿ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ‘ಎಲ್ಲಾದರೂ ಇರು ಎಂತಾದರೂ ಇರು’, ‘ಒಂದೇ ಒಂದೇ ಕರ್ನಾಟಕ ಒಂದೇ’, ‘ಹೊತ್ತಿತು ಹೊತ್ತಿತು ಕನ್ನಡದ ದೀಪ’, ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಗೀತೆಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಆದೇಶಿಸಲಾಗಿದೆ.

ಕರ್ನಾಟಕ ಸಂಭ್ರಮ 50 ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ರಾಜ್ಯದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಡು -ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ‘ಕನ್ನಡ -ಕನ್ನಡಿಗ –ಕರ್ನಾಟಕ’ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ.

ಕರ್ನಾಟಕ ಸಂಭ್ರಮ 50 ಅಭಿಯಾನದ ಭಾಗವಾಗಿ ನವೆಂಬರ್ 1ರಂದು ರಾಜ್ಯದಲ್ಲೆಡೆ ರಾಜ್ಯೋತ್ಸವ ಆಚರಿಸುವ ಕಾರ್ಯಕ್ರಮದಲ್ಲಿ ಆಯ್ಕೆ ಮಾಡಿದ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆ ಹಾಡುವ ಮೂಲಕ ಕನ್ನಡಾಂಬೆಗೆ ಗೀತ ಗಾಯನದ ಮೂಲಕ ನುಡಿನ ನ ಸಲ್ಲಿಸಲು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular