ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 15,078 ಖಾಲಿ ಹುದ್ದೆಗಳ ಭರ್ತಿ ಮಾಡಲು ಸಚಿವರು ಹಾಗೂ ಮುಖ್ಯಮಂತ್ರಿಗಳು ಹೊಂದಿರುವ ಖಾತೆಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ 15,078 ಹುದ್ದೆಗಳ ಭರ್ತಿ ಸಂಬಂಧ ಪತ್ರ ಬರೆಯಲಾಗಿದ್ದು, ಶೀಘ್ರವೇ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವುಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕ ಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದ್ದು, ಉಳಿದ 15,078 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.