alex Certify ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ‘ತೇಜ್’ ಚಂಡಮಾರುತ ಸೃಷ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ‘ತೇಜ್’ ಚಂಡಮಾರುತ ಸೃಷ್ಟಿ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೇಜ್ ಹೆಸರಿನ ಚಂಡಮಾರುತ ಸೃಷ್ಟಿಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರದ ಆಗ್ನೇಯ ಮತ್ತು ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ಸೃಷ್ಟಿಯಾಗುವ ಸಂಭವ ಇದೆ. ಇದು ಈ ವರ್ಷ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುವ ಎರಡನೇ ಚಂಡಮಾರುತ ಆಗಲಿದೆ.

ಹಿಂದೂ ಮಹಾಸಾಗರ ವಲಯದಲ್ಲಿ ಅನುಸರಿಸುವ ನಿಯಮಕ್ಕೆ ಅನುಗುಣವಾಗಿ ಈ ಚಂಡಮಾರುತಕ್ಕೆ ತೇಜ್ ಎಂದು ಹೆಸರಿಸಲಾಗಿದೆ. ಭಾನುವಾರದ ವೇಳೆಗೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ಓಮನ್ ಮತ್ತು ಯೆಮನ್ ನತ್ತ ಸಾಗಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ಹೇಳಿದೆ.

ಜೂನ್ ನಲ್ಲಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಬಿಪರ್ ಜಾಯ್ ಚಂಡಮಾರುತ ಸೃಷ್ಟಿಯಾಗಿತ್ತು. ದಿಕ್ಕು ಬದಲಾಯಿಸಿ ಗುಜರಾತ್, ಪಾಕಿಸ್ತಾನ ತೀರಗಳಿಗೆ ಅಪ್ಪಳಿಸಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...