
ಅಫಜಲಪುರ ತಾಲೂಕಿನ ಸಿಧನೂರ ಗ್ರಾಮದಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು ಬಲಭೀಮ ಸಗರ (23) ಎಂದು ಗುರುತಿಸಲಾಗಿದೆ. ಹಳೇ ವೈಷಮ್ಯದ ಹಿನ್ನೆಲೆ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸದ್ಯ ರೇವೂರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ, ಹಾಗೂ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

