JOB ALERT : ವೈದ್ಯಕೀಯ-ಅರೆವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್ಹೆಚ್ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಇಎನ್ಟಿ ಸರ್ಜನ್ ಹುದ್ದೆ ಸಂಖ್ಯೆ 01, ಸೈಕಿಯಾಟ್ರಿಸ್ಟ್ 01, ಅರಿವಳಿಕೆ ತಜ್ಞರು 02, ವೈದ್ಯರು 08, ಆಡಿಯೋಮೆಟ್ರಕ್ ಅಸಿಸ್ಟೆಂಟ್ 01, ಡಿಇಐಸಿ ಮ್ಯಾನೇಜರ್ 01 ಹುದ್ದೆಗಳಿಗೆ ಅರ್ಜಿ ವಿತರಿಸಲಾಗುವುದು.

ದಿ: 30-10-2023 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಅರ್ಜಿ ನಮೂನೆಯನ್ನು ಎನ್ಹೆಚ್ಎಂ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣ. ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು. ಹಾಗೂ ಅದೇ ದಿನ ಎಲ್ಲಾ ಹುದ್ದೆಗಳ ಮೂಲ ದಾಖಲಾರಿಗಳ ಪರಿಶೀಲನೆಯನ್ನು ಸಂಜೆ 5.30 ರವರೆಗೆ ನಡೆಸಲಾಗುವುದು.

ಎನ್ಹೆಚ್ಎಂ ಮಾರ್ಗಸೂಚಿಯಂತೆ ನೇಮಕಾತಿಯು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಗುವುದು. ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಅನುಭವ ಪ್ರಮಾಣಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಸ್ವವಿವರಗಳೊಂದಿಗೆ ಹಾಜರಾಗಬೇಕು.

ಹೆಚ್ಚಿನ ವಿವರಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, 1ನೇ ಮಹಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಆವರಣ, ಶಿವಮೊಗ್ಗ, ದೂ.ಸಂ: 08182-200337 ಸಂಪರ್ಕಿಸಬಹುದೆಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿಗಳು ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read