ಬೆಂಗಳೂರು : ಸುಳ್ಳು ಸುದ್ದಿ ಹರಡುವವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದು, ಸುಳ್ಳು ಸುದ್ದಿಗಳನ್ನು ಫ್ಯಾಕ್ಟ್ ಚೆಕ್ ಮಾಡಿ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಹೇಳಿದ್ದಾರೆ.
ಪೊಲೀಸ್ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸುಳ್ಳು ಸುದ್ದಿ ಹಬ್ಬಿಸಿ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಿ, ಸೈಬರ್ ಅಪರಾಧಗಳ ಬಗ್ಗೆ ಹೆಚ್ಚು ಗಮನ ಹರಿಸಿ, ದೇಶದಲ್ಲಿ ಎಲ್ಲಾ ಧರ್ಮ, ಜಾತಿಯವರು ಇದ್ದಾರೆ. ಯಾರೇ ಸುಳ್ಳು ಸುದ್ದಿ ಹಬ್ಬಿಸಿದ್ದರೂ ಕ್ರಮ ಕೈಗೊಳ್ಳಬೇಕು, ಸುಳ್ಳು ಸುದ್ದಿ ಹಬ್ಬಿಸಲು ಕಾರಣರಾದವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಫ್ಯಾಕ್ಟ್ ಚೆಕ್ ಟೀಂ ನಿಂದ ಸುಳ್ಳು ಸುದ್ದಿಗಳನ್ನು ಪರಿಶೀಲನೆ ಮಾಡಿ, ಸೋಶಿಯಲ್ ಮೀಡಿಯಾ ಮೇಲೆ ಕಣ್ಣೀಡಿ, ಸೈಬರ್ ಅಪರಾಧಗಳ ಬಗ್ಗೆ ಹೆಚ್ಚು ಗಮನಹರಿಸಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.