
ಆತ್ಮಹತ್ಯೆ ಮಾಡಿಕೊಂಡವರನ್ನು ಗ್ರಾಮದ ವೈ ಎಸ್ ಶಿವರಾಜು (45) ಎಂದು ಗುರುತಿಸಲಾಗಿದೆ. ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಪೊಲೀಸರು 13 ಮಂದಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಕೃಷ್ಣ, ಚಂದು, ರೇವನಾಯಕ, ನಿಂಗನಾಯಕ, ಚಿಕ್ಕಬೆಳ್ಳನಾಯಕ, ಆಲತ್ತೂರು ಮಹದೇವನಾಯಕ, ಡಿ.ಮಹದೇವಮನಾಯಕ, ದೇವನಾಯಕ, ಚಿನ್ನಸ್ವಾಮಿ ನಾಯಕ, ಸಂತೋಷ್, ಸಂದೇಶ್, ವೆಂಕಟರಮಣನಾಯಕ, ರಂಗಸ್ವಾಮಿನಾಯಕ ಸೇರಿ 13 ಮಂದಿ ವಿರುದ್ಧ ಬೇಗೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

