alex Certify ಕಾಫಿ ಬೆಳೆಗಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಫಿ ಬೆಳೆಗಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಪ್ರಸಕ್ತ (2023-24) ಸಾಲಿನ ‘ಬಿತ್ತನೆ ಕಾಫಿ ಬೀಜ’ಕ್ಕೆ ಆಸಕ್ತ ಕಾಫಿ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿತ್ತನೆ ಬೀಜಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸುವ ಕಾಫಿ ಬೆಳೆಗಾರರು ಮಂಡಳಿಯ ಕಚೇರಿಯಲ್ಲಿ ದೊರೆಯುವ ಅರ್ಜಿ ಭರ್ತಿ ಮಾಡಿ, ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ ರೂ.400 ಗಳನ್ನು ಮುಂಗಡವಾಗಿ ಪಾವತಿಸಿ ತಮ್ಮ ಹೆಸರನ್ನು ನೋಂದಾಯಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್, 10 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ಕಾಫಿ ಮಂಡಳಿಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಗೋಣಿಕೊಪ್ಪಲು ಕಾಫಿ ಮಂಡಳಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...