ನವದೆಹಲಿ: ಲಷ್ಕರ್-ಎ-ಜಬ್ಬಾರ್ ಭಯೋತ್ಪಾದಕ ಸಂಘಟನೆಯ ಸಂಸ್ಥಾಪಕ ಮತ್ತು ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್‌ನ ಆಪ್ತ ಸಹಾಯಕ ದಾವೂದ್ ಮಲಿಕ್ ನನ್ನು ಪಾಕಿಸ್ತಾನದ ಉತ್ತರ ವಜೀರಿಸ್ತಾನ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ.
ಶುಕ್ರವಾರ ಉತ್ತರ ವಜಿರಿಸ್ತಾನ್ ಜಿಲ್ಲೆಯ ಮಿರಾಲಿ ಪ್ರದೇಶದಲ್ಲಿ ಪೊಲೀಸರು ಉದ್ದೇಶಿತ ದಾಳಿಯಲ್ಲಿ ಮಲಿಕ್ ಕೊಲ್ಲಲ್ಪಟ್ಟರು. ಘಟನೆ ಬಳಿಕ ದಾಳಿಕೋರರು ಪರಾರಿಯಾಗಿದ್ದಾರೆ. ಮಲಿಕ್ ಅವರು ಖಾಸಗಿ ಕ್ಲಿನಿಕ್ ನಲ್ಲಿದ್ದಾಗ ಹೊಂಚು ಹಾಕಿ ದಾಳಿಕೋರರು ಹತ್ಯೆ ಮಾಡಿದ್ದಾರೆ.
ಜೈಶ್-ಎ-ಮೊಹಮ್ಮದ್ ಅನ್ನು ಸ್ಥಾಪಿಸಿದ ಅಜರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ ಮತ್ತು 2019 ರಲ್ಲಿ ಪುಲ್ವಾಮಾ ದಾಳಿ ಸೇರಿದಂತೆ ಭಾರತದ ಮೇಲೆ ನಡೆದ ಹಲವಾರು ಭಯೋತ್ಪಾದಕ ದಾಳಿಗಳಿಗೆ ಜವಾಬ್ದಾರನಾಗಿರುತ್ತಾನೆ. 2019 ರಲ್ಲಿಮಸೂದ್ ಅಜರ್ ಅನ್ನು ‘ಜಾಗತಿಕ ಭಯೋತ್ಪಾದಕ’ ಎಂದು ಗುರುತಿಸಲಾಗಿದೆ.
ಮಲಿಕ್‌ನನ್ನು ಅಜರ್‌ನ ಬಲಗೈ ಬಂಟ ಎಂದು ಪರಿಗಣಿಸಲಾಗಿತ್ತು ಮತ್ತು ಜೆಎಂ ಮತ್ತು ಲಷ್ಕರ್-ಎ-ಜಾಂಗ್ವಿಯಂತಹ ಹಲವಾರು ಭಯೋತ್ಪಾದಕ ಸಂಘಟನೆಗಳ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ.
ಮಲಿಕ್ ಸಾವು ಭಾರತ ವಿರೋಧಿ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಿರುವ ಭಯೋತ್ಪಾದಕರ ಹತ್ಯೆಗೆ ಮತ್ತೊಂದು ಸೇರ್ಪಡೆಯಾಗಿದೆ. ಈ ತಿಂಗಳ ಆರಂಭದಲ್ಲಿ ಮತ್ತೋರ್ವ ವಾಂಟೆಡ್ ಭಯೋತ್ಪಾದಕ ಹಫೀಜ್ ಸಯೀದ್‌ನ ಆಪ್ತ ಸಹಾಯಕ ಜೆಎಂ ಭಯೋತ್ಪಾದಕ ಖೈಸರ್ ಫಾರೂಕ್ ಕರಾಚಿಯಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಹತ್ಯೆಯಾಗಿದ್ದ.