HomeKarnatakaಸಾರ್ವಜನಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾ.ಪಂ ನ ಬಾಪೂಜಿ ಸೇವಾ ಕೇಂದ್ರದಲ್ಲೇ ಸಿಗುತ್ತೆ ಈ...

ಸಾರ್ವಜನಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾ.ಪಂ ನ ಬಾಪೂಜಿ ಸೇವಾ ಕೇಂದ್ರದಲ್ಲೇ ಸಿಗುತ್ತೆ ಈ ಎಲ್ಲಾ ಸೇವೆ

ಬೆಂಗಳೂರು : ಕಂದಾಯ ಇಲಾಖೆಯ ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದಡಿ ನಾಡಕಛೇರಿಗಳಲ್ಲಿ ಒದಗಿಸಲಾಗುತ್ತಿರುವ 44 ಸೇವೆಗಳನ್ನು ಪಡೆಯಲು ಸಲ್ಲಿಸಲು ಜನರು ಹೋಬಳಿ ಮಟ್ಟದಲ್ಲಿರುವ ಅಟಲ್ ಜೀ ಜನಸ್ನೇಹಿ ಕೇಂದ್ರ/ನಾಡಕಛೇರಿಗಳಿಗೆ ಭೇಟಿ ನೀಡಬೇಕಾಗಿರುತ್ತದೆ.

ಪ್ರತಿಯೊಂದು ಹೋಬಳಿಯಲ್ಲಿ ಆರರಿಂದ ಏಳು ಗ್ರಾಮ ಪಂಚಾಯತಿಗಳನ್ನು ಹೊಂದಿರುತ್ತದೆ. ಈ ಎಲ್ಲಾ ಗ್ರಾಮ ಪಂಚಾಯತಿಯ ಸುಮಾರು 20-50 ಸಾವಿರ ಜನರು, ಸರ್ಕಾರಿ ಸೇವೆಗಳನ್ನು ಹೋಬಳಿ ಮಟ್ಟದಲ್ಲೇ ಪಡೆಯಬೇಕಾದುದರಿಂದ ಜನಸಂದಣಿ ಹೆಚ್ಚುವುದರ ಜೊತೆಗೆ ಕೇಂದ್ರದಲ್ಲಿ ತ್ವರಿತ ಗತಿಯಲ್ಲಿ ಸೇವೆಯನ್ನು ಒದಗಿಸುವುದಕ್ಕೆ ತೊಡಕಾಗುತ್ತಿತ್ತು. ಜೊತೆಗೆ ಸಾರ್ವಜನಿಕರು ಸೇವೆಗಳನ್ನು ಪಡೆಯಲು ಸಾಕಷ್ಟು ದೂರ ಕ್ರಮಿಸಬೇಕಾದುದರಿಂದ ಸಾಕಷ್ಟು ಹಣ ವ್ಯಯಿಸಬೇಕಾಗುತ್ತಿತ್ತು.

ಈ ಸಮಸ್ಯೆಗೆ ಪರಿಹಾರವಾಗಿ, ಗ್ರಾಮೀಣ ಜನತೆ ತಮಗೆ ಅವಶ್ಯವಿರುವ ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದಡಿ ಬರುವ “ಆದಾಯ ಪ್ರಮಾಣ ಪತ್ರ”, “ಜಾತಿ ಮತ್ತು ಆದಾಯ ಪ್ರಮಾಣ ಪತ್ರ” “ವಾಸ ಸ್ಥಳ ಪ್ರಮಾಣ ಪತ್ರ’ಗಳಂತಹ ಪ್ರಮುಖ ಸೇವೆಗಳನ್ನು ಮತ್ತಷ್ಟು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಯಲ್ಲೇ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸಲು ಸರ್ಕಾರವು ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದಾಗಿ, ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಅಂದಾಜು 3.7 ಕೋಟಿ ಜನರಿಗೆ ಅಂದರೆ 78 ಲಕ್ಷ ಕುಟುಂಬಗಳು ಆಟಲ್ಜೀ ಜನಸ್ನೇಹಿ (ನಾಡಕಛೇರಿ) ಸೇವೆಗಳನ್ನು ಪಡೆಯುವಲ್ಲಿ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳು ಮಹತದ ಪಾತ್ರವಹಿಸಲಿವೆ.

ಆದುದರಿಂದ, ಪಂಚತಂತ್ರ 2.0 ತಂತ್ರಾಂಶವನ್ನು ನಾಡಕಛೇರಿ ತಂತ್ರಾಂಶದೊಂದಿಗೆ ಸಂಯೋಜನೆ ಮಾಡಲಾಗಿದೆ. ಸಾರ್ವಜನಿಕರು ಇನ್ನೂ ಮುಂದೆ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಡಿ ಬರುವ “ಆದಾಯ ಪ್ರಮಾಣ ಪತ್ರ”, “ಜಾತಿ ಮತ್ತು ಆದಾಯ ಪ್ರಮಾಣ ಪತ್ರ” “ವಾಸ ಸ್ಥಳ ಪ್ರಮಾಣ ಪತ್ರ” ಗಳಂತ ಪ್ರಮುಖ ಸೇವೆಗಳನ್ನು ಮತ್ತು ಇನ್ನೂ ಮುಂತಾದ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಅರ್ಜಿ ಸಲ್ಲಿಸಿ, ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಸದರಿ ಸೇವೆಗಳನ್ನು ಪಡೆಯಬಹುದಾಗಿದೆ.
ಅದರಂತೆ, ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಪಂಚತಂತ್ರ 2.0 ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕರಿಸಿ, ಉಲ್ಲೇಖಿತ ಆದೇಶರಂತೆ, ಅನುಬಂಧ-1 ರಲ್ಲಿ ತಿಳಿಸಲಾಗಿರುವ ಅರ್ಜಿ ಶುಲ್ಕವನ್ನು ಪಡೆಯಲು ಆದೇಶಿಸಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular