ಬೆಂಗಳೂರು : ನಗರದ ಬನ್ನೇರುಘಟ್ಟ ರಸ್ತೆಯ ಫೋ ರ್ಟಿಸ್ ಆಸ್ಪತ್ರೆಯಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಬೊಮ್ಮಾಯಿ ಚೇತರಿಸಿಕೊಳ್ಳುತ್ತಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಬೊಮ್ಮಾಯಿ ಚೇತರಿಸಿಕೊಳ್ಳುತ್ತಿದ್ದು, ನಾಳೆ ಆಸ್ಪತ್ರೆಯಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.