ಬೆಂಗಳೂರು : ಹೆಚ್ ಡಿ ದೇವೇಗೌಡರಿಗೆ ಕೈ ಮುಗಿದು ಬೇಡಿಕೊಳ್ಳುವೆ ‘ಮೈತ್ರಿ’ ವಿಚಾರ ಮರುಪರಿಶೀಲನೆ ಮಾಡಿ ಎಂದು ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿ.ಎಂ.ಇಬ್ರಾಹಿಂ ಲೋಕಸಭೆ ಚುನಾವಣೆಗೆ ಸಮಯವಿದೆ, ಮಾತಾಡೋಣ ಎಂದಿದ್ದೇನೆ. ಕೈ ಮುಗಿದು ಪ್ರಾರ್ಥಿಸುವೆ ‘ಮೈತ್ರಿ’ ವಿಚಾರ ಮರುಪರಿಶೀಲನೆ ಮಾಡಿ ಎಂದು ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿಶ್ ಶಾಗೆ ಗೌರವ ಕೋಡೋಣ. ಅಕ್ಟೋಬರ್ 26ರಂದು ಮುಂಬೈಗೆ ಹೋಗುತ್ತಿದ್ದೇನೆ. ಬೇರೆ ಪಕ್ಷದ ನಾಯಕರನ್ನ ಭೇಟಿ ಮಾಡ್ತೇನೆ, ಒಂದೇ ಕಡೆ ಕೂರಲ್ಲ. ನಾನು ತ್ರಿಲೋಕ ಸಂಚಾರಿ ಎಂದು ಮಾಜಿ ಎಂಎಲ್ಸಿ ಇಬ್ರಾಹಿಂ ತಿಳಿಸಿದರು.ಜಿಲ್ಲಾಧ್ಯಕ್ಷರು, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಯಾರನ್ನೂ ನಾನು ಬಹಿರಂಗವಾಗಿ ಕರೆಯುತ್ತಿಲ್ಲ ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. ಇಬ್ರಾಹಿಂ ಮುಂದಾಗಿದ್ದಾರೆ ಎನ್ನಲಾಗಿದೆ. ದಸರಾ ರಜೆ ಮುಗಿದ ನಂತರ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. ಇಬ್ರಾಹಿಂ ಸಜ್ಜಾಗಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಮೊರೆ ಹೋಗಿದ್ದಾರೆ ಎನ್ನಲಾಗಿದೆ.