
ಈ ಬಗ್ಗೆ ಟ್ವೀಟ್ ಮಾಡಿದ ಹೆಚ್ಡಿಕೆ ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ! ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.
ಜಲ ವಿದ್ಯುತ್ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ….. ….. ಗಳಂತೆ ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ವೆಸ್ಟ್ ಎಂಡ್ ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? 5 ವರ್ಷ ಸರಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಭಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ.…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 22, 2023

