ಘೋರ ದುರಂತ: ನದಿಯಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಗಳು ಸಾವು

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಗೌತಮಿ-ಗೋದಾವರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ 4:30ರ ಸುಮಾರಿಗೆ ತಲ್ಲರೇವು ಮಂಡಲದ ಪಿಳ್ಳಂಕ ಗ್ರಾಮದಲ್ಲಿ 7 ವಿದ್ಯಾರ್ಥಿಗಳು ಈಜುವ ಉದ್ದೇಶದಿಂದ ಗೋದಾವರಿ ನದಿಗೆ ಇಳಿದಿದ್ದಾರೆ. ಅವರಲ್ಲಿ ನಾಲ್ವರು ನೀರಿನಲ್ಲಿ ಮುಳುಗಿದ್ದು, ಭಾನುವಾರ ಬೆಳಗ್ಗೆ ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಉಳಿದ ಮೂವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಪದವಿ ಪೂರ್ವ ಕೋರ್ಸ್‌ಗಳನ್ನು ಓದುತ್ತಿದ್ದರು. 20 ವರ್ಷದ ವಿದ್ಯಾರ್ಥಿಗಳು  ಪಶ್ಚಿಮ ಗೋದಾವರಿ ಜಿಲ್ಲೆಯ ತನುಕು ಪಟ್ಟಣಕ್ಕೆ ಸೇರಿದವರಾಗಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಅವರು ಮೊದಲು ಹತ್ತಿರದ ಯಾನಂಗೆ ಹೋಗಿ ನಂತರ ಪಿಳ್ಳಂಕಕ್ಕೆ ಬಂದಿದ್ದರು. ನಾಲ್ವರು ವಿದ್ಯಾರ್ಥಿಗಳು ಈಜುತ್ತಿದ್ದಾಗ ಬಲವಾದ ಪ್ರವಾಹಕ್ಕೆ ಸಿಲುಕಿಕೊಂಡರು

ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್), ಅಗ್ನಿಶಾಮಕ, ಕಂದಾಯ ಮತ್ತು ಪೊಲೀಸ್ ಇಲಾಖೆಗಳು ಮತ್ತು ಮೀನುಗಾರರ ಕಾರ್ಯಾಚರಣೆ ನಂತರ ಅವರ ಮೃತದೇಹಗಳನ್ನು ಹೊರತೆಗೆಯಲಾಯಿತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read