HomeKarnatakaBREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಎರಡು ಕಾರ್ ಡಿಕ್ಕಿ; ಓರ್ವ ಸಾವು

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಎರಡು ಕಾರ್ ಡಿಕ್ಕಿ; ಓರ್ವ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದು ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್ ಏರ್ಪೋರ್ಟ್ ಕಡೆಗೆ ಹೋಗುತ್ತಿದ್ದ ಮತ್ತೊಂದು ಕಾರ್ ಗೆ ಡಿಕ್ಕಿ ಹೊಡೆದಿದೆ.

ಕಾರ್ ನಲ್ಲಿದ್ದ ಶೇಕ್ ಮಹಮ್ಮದ್ ಸಾವನ್ನಪ್ಪಿದ್ದು, ಮೂವರು ಸ್ನೇಹಿತರಿಗೆ ಗಾಯಗಳಾಗಿವೆ. ಸ್ನೇಹಿತರ ಜೊತೆಗೆ ಮೃತ ಶೇಕ್ ಮಹಮ್ಮದ್ ಹೊರಗೆ ಹೋಗಿದ್ದರು. ಮತ್ತೊಂದು ಕಾರ್ ನಲ್ಲಿದ್ದ ಲಕ್ಷ್ಮಿ, ನರೇಂದ್ರ ಹಾಗೂ ಬಾಲಕಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular