HomeIndiaಬಿಜೆಪಿ ಕಾರ್ಯಕರ್ತರಿಂದಲೇ ಪಕ್ಷದ ಕಚೇರಿ ಧ್ವಂಸ

ಬಿಜೆಪಿ ಕಾರ್ಯಕರ್ತರಿಂದಲೇ ಪಕ್ಷದ ಕಚೇರಿ ಧ್ವಂಸ

ರಾಜಸ್ಥಾನದ ರಾಜಸಮಂದ್ ಕ್ಷೇತ್ರದಲ್ಲಿ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆಯ ಬಗ್ಗೆ ಭಿನ್ನಮತೀಯ ನಾಯಕರ ಬೆಂಬಲಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ರಾಜಸ್ಥಾನದಲ್ಲಿ ಬಿಜೆಪಿಗೆ ಆಂತರಿಕ ಸವಾಲು ಎದುರಾಗಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್‌ಸಮಂದ್ ಜಿಲ್ಲೆಯಲ್ಲಿ, ಬಿಜೆಪಿ ಅತೃಪ್ತರ ಬೆಂಬಲಿಗರು ಪಕ್ಷದ ಕಚೇರಿಯಲ್ಲಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದರು. ಪ್ರಚಾರಕ್ಕೆ ಸಂಬಂಧಿಸಿದ ವಸ್ತುಗಳನ್ನು ಸುಟ್ಟು ಹಾಕಿದರು, ಜೊತೆಗೆ ಟೈರ್‌ಗಳನ್ನು ಸುಟ್ಟಿದ್ದಾರೆ.

ದೀಪ್ತಿ ಮಹೇಶ್ವರಿ ಅವರನ್ನು ಚುನಾವಣಾ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದರ ವಿರುದ್ಧ ಉಳಿದ ಆಕಾಂಕ್ಷಿಗಳ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಗಳಿಗೆ ಸಂಬಂಧಿಸಿದಂತೆ ಯಾವುದೇ ಔಪಚಾರಿಕ ಪ್ರಕರಣ ದಾಖಲಾಗಿಲ್ಲ ಎಂದು ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ.

ಬಿಜೆಪಿಯ ರಾಜ್ಯ ಶಿಸ್ತು ಸಮಿತಿಯು ಈ ಅಶಿಸ್ತಿನ ಕೃತ್ಯಗಳಿಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ನಾಲ್ವರು ಸದಸ್ಯರನ್ನು ಅಮಾನತುಗೊಳಿಸಿದೆ.

ಟಿಕೆಟ್ ಹಂಚಿಕೆ ವಿರುದ್ಧದ ಪ್ರತಿಭಟನೆಗಳು ಕೇವಲ ರಾಜಸಮಂದ್‌ಗೆ ಸೀಮಿತವಾಗಿಲ್ಲ. ಚಿತ್ತೋರ್‌ಗಢ್, ಉದಯಪುರ, ಕೋಟಾ, ಜೈಪುರ, ಅಲ್ವಾರ್ ಮತ್ತು ಬುಂಡಿಯಲ್ಲಿ ಭಿನ್ನಮತೀಯ ಬೆಂಬಲಿಗರು ಬೀದಿಗಿಳಿದರು, ಅಲ್ಲಿ ಅವರು ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಕೃತಿಗಳನ್ನು ಸುಟ್ಟುಹಾಕಿದರು.

ರಾಜ್‌ಸಮಂದ್‌ನಲ್ಲಿ ದಿನೇಶ್ ಬಡಾಲಾ, ಗಣೇಶ್ ಪಲಿವಾಲ್ ಮತ್ತು ಮಹೇಂದ್ರ ಕೊಠಾರಿ ಸೇರಿದಂತೆ ಸ್ಥಳೀಯ ಬಿಜೆಪಿ ಸ್ಪರ್ಧಿಗಳ ಗುಂಪು ಮತ್ತು ಅವರ ಬೆಂಬಲಿಗರು ಪಕ್ಷದ ಕಚೇರಿಗೆ ಪ್ರವೇಶಿಸಿದ್ದರಿಂದ ಅಸಮಾಧಾನ ವ್ಯಕ್ತವಾಗಿದೆ. ಪ್ರತಿಭಟನಾಕಾರರು ಅಭ್ಯರ್ಥಿ ದೀಪ್ತಿ ಮಹೇಶ್ವರಿ ವಿರುದ್ಧ ಘೋಷಣೆಗಳನ್ನು ಕೂಗಿ ಕಚೇರಿಯ ಪೀಠೋಪಕರಣಗಳಿಗೆ ಹಾನಿ ಮಾಡಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular