ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯದ ಮೊತ್ತವನ್ನು 2.50 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.
ವೈಯಕ್ತಿಕ ಕಾಮಗಾರಿಗಳ ಮೊತ್ತ ಹೆಚ್ಚಳ ಮಾಡಿರುವುದರಿಂದ ಬರಗಾಲದ ಸಂದರ್ಭದಲ್ಲಿ ರೈತರು, ಕೃಷಿ ಕೂಲಿ ಕಾರ್ಮಿಕರಿಗೆ ವರದಾನವಾಗಲಿದೆ. ಉದ್ಯೋಗ ಸೃಷ್ಟಿಗೆ ಅವಕಾಶ ಸಿಗಲಿದೆ. ನರೇಗಾ ಯೋಜನೆ ಅಡಿ 2.50 ಲಕ್ಷ ರೂ. ವರೆಗೆ ಇದುವರೆಗೆ ಕಾಮಗಾರಿ ನೀಡಲಾಗುತ್ತಿತ್ತು. ಈ ಮೊತ್ತವನ್ನು 5 ಲಕ್ಷ ರೂ. ವರೆಗೆ ಹೆಚ್ಚಳ ಮಾಡಲಾಗಿದೆ.
ಕೂಲಿಕಾರರಿಗೆ ಉದ್ಯೋಗ ಒದಗಿಸುವುದು, ಅರ್ಹ ಫಲಾನುಭವಿಗಳ ಜೀವನಕ್ಕೆ ನೆರವಾಗುವ ವೈಯಕ್ತಿಕ ಆಸ್ತಿಗಳ ಸೃಜನೆಗೆ ಅವಕಾಶ ನೀಡಿ ಅವರ ಆರ್ಥಿಕ ಸ್ಥಿತಿ ಉತ್ತಮಪಡಿಸುವ ಉದ್ದೇಶವನ್ನು ಯೋಜನೆ ಹೊಂದಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೂಲಿಕಾರರಿಂದ ಬೇಡಿಕೆ ಬಂದಿದ್ದು, ಈ ಕಾರಣದಿಂದ ಸರ್ಕಾರ ಕಾಮಗಾರಿಗಳ ಮೊತ್ತವನ್ನು ಹೆಚ್ಚಳ ಮಾಡಿದೆ.