ಬೆಂಗಳೂರು ನಗರ ಜಿಲ್ಲೆ : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳಾದ ಬಡಗಿ, ಗಾರೆ, ದೋಬಿ, ಕಲ್ಲು ಕೆಲಸ, ಕುಲುಮೆ ಕೆಲಸ ಮಾಡುವ ಗ್ರಾಮೀಣ ಕುಶಲಕರ್ಮಿಗಳಿಗೆ ನೀಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ವೆಬ್ ಸೈಟ್: www.bengaluruurban.nic.in ನಲ್ಲಿ ಪಡೆದು ಅರ್ಜಿಯೊಂದಿಗೆ ಎಲ್ಲಾ ದಾಖಲಾತಿಗಳನ್ನು ನವೆಂಬರ್ 07 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ (ಖಾಗ್ರಾ) ರವರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಎಸ್.ಜೆ ಪಾಲಿಟೆಕ್ನಿಕ್ ಕಾಲೇಜು ಆವರಣ, ಕೆ.ಆರ್. ವೃತ್ತ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ: 080-22375765 / 9448846441 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕರು (ಖಾಗ್ರಾ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.