ಬೆಂಗಳೂರು : ಹುಲಿ ಉಗುರು ಧರಿಸಿದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
2 ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.
ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ನಿನ್ನೆ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಇದೇ ಮೊದಲ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ.
ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕತ್ತಿನಲ್ಲಿ ದೊಡ್ಡ ಚೈನು ಹಾಕಿಕೊಂಡಿದ್ದು, ಅದರಲ್ಲಿ ಹುಲಿ ಉಗುರು ಇದೆ ಎಂದು ತಿಳಿದು ಬಂದಿದ್ದು. ಹುಲಿ ಉಗುರು ಧರಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಹುಲಿ ಉಗುರು ಧರಿಸಿದ ಆರೋಪದಲ್ಲಿ ಕನ್ನಡದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಸಂತೋಷ್ ಅವರ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾರೆ ಎಂಬ ದೂರು ಇತ್ತು. ಆ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ವನ್ಯಜೀವಿಗಳ ಕಾನೂನಿನ ಆಧಾರದ ಮೇಲೆ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.