HomeKarnatakaಮಹತ್ವದ ರಾಜಕೀಯ ಬೆಳವಣಿಗೆ: ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಮಹತ್ವದ ರಾಜಕೀಯ ಬೆಳವಣಿಗೆ: ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಚಿಕ್ಕೋಡಿ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ.

ಶೆಟ್ಟರ್ ಅವರನ್ನು ಭೇಟಿಯಾದ ಬಗ್ಗೆ ರಮೇಶ್ ಜಾರಕಿಹೊಳೆ ಒಪ್ಪಿಕೊಂಡಿದ್ದಾರೆ. ನಂದಗಾಂವ ಗ್ರಾಮದಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದು ನಿಜ. ಶೆಟ್ಟರ್ ನಮ್ಮ ಪ್ರೀತಿಯ ವ್ಯಕ್ತಿ. ಅವರ ಬಗ್ಗೆ ಗೌರವ ಇದೆ. ಅವರು ಎಲ್ಲೇ ಇದ್ದರೂ ನಮ್ಮ ಹಿರಿಯರು. ನಾನು ಸತತವಾಗಿ ಆರು ಬಾರಿ ಅವರನ್ನು ಭೇಟಿಯಾಗಿದ್ದೇನೆ. ಆದರೆ ಈ ಬಾರಿ ಭೇಟಿಯಾಗಿರುವ ವಿಚಾರ ಸೋರಿಕೆಯಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಗದೀಶ್ ಶೆಟ್ಟರ್ ಅವರನ್ನು ಅನೇಕ ಸಲ ಭೇಟಿಯಾಗಿದ್ದೇನೆ. ಅವರು ನಮ್ಮ ಪಕ್ಷ ಬಿಡಬಾರದಿತ್ತು. ನಮ್ಮ ಭೇಟಿಯ ವೇಳೆ ರಾಜಕೀಯ ವಿಚಾರವಾಗಿ ಒಂದು ಶಬ್ದ ಕೂಡ ಚರ್ಚೆಯಾಗಿಲ್ಲ. ವೈಯಕ್ತಿಕ ಭೇಟಿ ಅಷ್ಟೇ ಎಂದು ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಇತ್ತೀಚೆಗೆ ರಮೇಶ್ ಜಾರಕಿಹೊಳಿ -ಶೆಟ್ಟರ್ ಭೇಟಿ ವಿಚಾರ ಭಾರಿ ಚರ್ಚೆಯಾಗಿತ್ತು. ಆಪರೇಷನ್ ಹಸ್ತ ವದಂತಿಗಳ ನಡುವೆ ಬಿಜೆಪಿ ಶಾಸಕರ ಸಂಪರ್ಕದಲ್ಲಿರುವ ಶೆಟ್ಟರ್ ಕಾಂಗ್ರೆಸ್ ಗೆ ಸೆಳೆಯಲು ಮುಂದಾಗಿದ್ದಾರೆ ಎಂದು ಹೇಳಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular