HomeIndiaBREAKING: ಸರ್ಕಾರಿ ಬಸ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

BREAKING: ಸರ್ಕಾರಿ ಬಸ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಸಂಗಮ್-ಕೃಷ್ಣಗಿರಿ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಕಾರ್ ಮತ್ತು ರಾಜ್ಯ ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ.

ಸೋಮವಾರ ತಡರಾತ್ರಿ ತಿರುವಣ್ಣಾಮಲೈನ ಅಂಧನೂರ್ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ. ಕಾರ್ ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿದೆ. 10 ಜನರಿದ್ದ ಕಾರ್ ತಿರುವಣ್ಣಾಮಲೈನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಸೆಂಗಂ ಬಳಿ ಸರ್ಕಾರಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರ್ ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯ ಕುರಿತು ಸೆಂಗಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular