HomeAutoಮೈಸೂರು ದಸರಾ: ಕೆ.ಆರ್. ಸರ್ಕಲ್ ನಲ್ಲಿ ಸಂಚಾರ ನಿಷೇಧ

ಮೈಸೂರು ದಸರಾ: ಕೆ.ಆರ್. ಸರ್ಕಲ್ ನಲ್ಲಿ ಸಂಚಾರ ನಿಷೇಧ

ಮೈಸೂರು: ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣೆ ಆರಂಭವಾಗಿದೆ. ಸಂಜೆ 4:40ರಿಂದ 5 ಗಂಟೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ ಆರಂಭವಾಗಲಿದೆ.

ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಜನರು ಅರಮನೆ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನಾದ್ಯಂತ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಂಬೂ ಸವಾರಿ ಸಾಗುವ ಮಾರ್ಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಂಬೂ ಸವಾರಿ ಹಿನ್ನೆಲೆಯಲ್ಲಿ ಮೈಸೂರಿನ ಕೆ.ಆರ್.ಸರ್ಕಲ್ ನಲ್ಲಿ ಜನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಅರಮನೆಯಿಂದ ಕೆ.ಆರ್.ಸರ್ಕಲ್ ಮೂಲಕವಾಗಿ ಜಂಬೂ ಸವಾರಿ ಮೆರವಣಿಗೆಸಾಗಲಿದೆ. ಈ ಹಿನ್ನೆಲೆಯಲ್ಲಿ ಜನರು ರಸ್ತೆಯ ಇಕ್ಕೆಲೆಗಳಲ್ಲಿ ಜಮಾವಣೆಗೊಂಡಿದ್ದಾರೆ. ಕೆ.ಆರ್.ಸರ್ಕಲ್ ನಲ್ಲಿ ಜನರ ಓಡಾಟ ಸಂಪೂರ್ಣ ನಿರಬಂಧಿಸಲಾಗಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular