BIG NEWS: ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಉಗ್ರರ ಕರಿನೆರಳ ಭೀತಿ; ಕೇಂದ್ರ ಗೃಹ ಇಲಾಖೆ ಸೂಚನೆ ಬೆನ್ನಲ್ಲೇ ಖಾಕಿ ಕಟ್ಟೆಚ್ಚರ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣೆ ಆರಂಭವಾಗಿದ್ದು, ದೇಶ-ವಿದೇಶಗಳಿಂದಲೂ ಲಕ್ಷಾಂತರ ಜನರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ದಸರಾ ಜಂಬೂ ಸವಾರಿಗೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಮೈಸೂರು, ಬೆಂಗಳೂರು ಉಗ್ರರ ಹಿಟ್ ಲಿಸ್ಟ್ ನಲ್ಲಿರುವ ವಿಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಕ್ಕೆ ಕಟ್ಟೆಚ್ಚರ ವಹಿಸಲು ಸೂಚಿಸಿರುವ ಬೆನ್ನಲ್ಲೇ ದಸರಾ ಜಂಬೂ ಸವಾರಿಗೆ ಖಾಕಿ ಹೈ ಅಲರ್ಟ್ ಘೋಷಿಸಲಾಗಿದೆ. ಇಡೀ ಮೈಸೂರು ನಗರದಾದ್ಯಂತ ಹಾಗೂ ಜಂಬೂ ಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅಲ್ಲದೇ ಜಂಬೂ ಸವಾರಿ ಸಾಗುವ ಮಾರ್ಗಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣಾ ಕಾರ್ಯ ಕೈಗೊಳ್ಳಲಾಗಿದೆ. ಅರಮನೆಯ ಮೂಲೆ ಮೂಲೆಗಳಲ್ಲೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಜಂಬೂ ಸವಾರಿ ಸಾಗಲಿದ್ದು, ಜಂಬೂ ಸವಾರಿ ಭದ್ರತೆಗಾಗಿ 6000 ಪೊಲೀಸರನ್ನು ನಿಯೋಜಿಸಲಾಗಿದೆ.

11 ಐಪಿಎಸ್ ಅಧಿಕಾರಿಗಳು ಸೇರಿದಂತೆ 4000 ಪೊಲೀಸರನ್ನು ಅರಮನೆ ಸುತ್ತಮುತ್ತ ನಿಯೋಜಿಸಲಾಗಿದೆ. ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಅರಮನೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ದಸರಾ ಜಂಬೂ ಸವಾರಿ ಭದ್ರತೆಗಾಗಿ ವಿವಿಧ ಜಿಲ್ಲೆಗಳಿಂದಲೂ ಪೊಲಿಸರನ್ನು ಕರೆಸಲಾಗಿದ್ದು, ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read