HomeKarnatakaGruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ’ 2 ನೇ ಕಂತಿನ...

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ’ 2 ನೇ ಕಂತಿನ ಹಣ ಖಾತೆಗೆ ಜಮಾ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ.

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ನೋಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ 2 ಕಂತಿನ ಹಣವನ್ನು ಅರ್ಹ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದ್ದು, ಹಣ ಜಮೆ ಆಗಿರುವ ಕುರಿತಂತೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಸಂದೇಶ ಬಂದವರ ಖಾತೆಗೆ ರಾಜ್ಯ ಸರ್ಕಾರದಿಂದ ಅರ್ಹ ಫಲಾನುಭವಿ ಯಜಮಾನಿ ಮಹಿಳೆಯರ ಜಮಾ ಮಾಡಲಾಗಿದೆ.

ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಂತ ಈ ರೀತಿ ಪರಿಶೀಲಿಸಿಕೊಳ್ಳಿ..

ಆನ್ಲೈನಲ್ಲಿ ಕರ್ನಾಟಕ ಸರ್ಕಾರದ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಈ ಲಿಂಕ್ ಮೂಲಕ ಪರೀಶಿಲನೆ ಮಾಡಬಹುದಾಗಿದೆ. https://ahara.kar.nic.in ಇದರಲ್ಲಿ ಕೂಡ ಚೆಕ್ ಮಾಡಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular