HomeKarnatakaBIG NEWS: ಕುಮಾರಸ್ವಾಮಿ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ; ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು

BIG NEWS: ಕುಮಾರಸ್ವಾಮಿ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ; ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಆಣೆ, ಪ್ರಮಾಣದ ಮಾತುಗಳು ಕೇಳಿಬಂದಿವೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾರಿಂದಲೂ 1 ರೂಪಾಯಿ ಪಡೆದುಕೊಂಡಿಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಶಾಸಕ ಬಾಲಕೃಷ್ಣ, ರಾಮನಗರ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಈ ಬಗ್ಗೆ ನಾವು ಚರ್ಚೆಗೆ ಸಿದ್ಧ. ನಾವು ನಮ್ಮ ಸಂಸದರ ಜೊತೆ ಚರ್ಚೆಗೆ ಬರುತ್ತೇವೆ. ಕುಮಾರಸ್ವಾಮಿಯವರು ಚರ್ಚೆಗೆ ಬರಲು ಸಿದ್ಧರಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್.ಡಿ.ಕೆ ಅವರು ಸಿಎಂ ಆಗಿದ್ದಾಗ ಯಾಕೆ ಡಿ.ಕೆ.ಶಿವಕುಮಾರ್ ಆಸ್ತಿ ಮುಟ್ಟುಗೋಲು ಹಾಕಿಕೊಂಡಿಲ್ಲ? ಹೆಚ್.ಡಿ.ಕೆ. ಸತ್ಯಹರಿಶ್ಚಂದ್ರ ವಂಶಸ್ಥರಾ? ಯಾವ ವ್ಯವಹಾರದಲ್ಲಿಯೂ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ. ಕುಮಾರಸ್ವಾಮಿ ಅಮಿತ್ ಶಾ ಬಳಿ ಸುಪಾರಿ ಪಡೆದವರ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕನಕಪುರ ಬೆಂಗಳೂರು ನಗರ ಜಿಲ್ಲೆಗೆ ಸೇರಲ್ಲ. ಡಿ.ಕೆ.ಶಿವಕುಮಾರ್ ಕೇವಲ ಚರ್ಚೆಗೋಸ್ಕರ ಹೇಳಿದ್ದಾರಷ್ಟೇ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಡುವ ಪ್ರಸ್ತಾಪವಿದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular