HomeKarnataka3 ಹುದ್ದೆಗಳಿಗೆ ಒಂದೇ ದಿನ KPSC ಪರೀಕ್ಷೆ ನಿಗದಿ: ದಿನಾಂಕ ಬದಲಿಸಿ ಬೇರೆ ದಿನಗಳಲ್ಲಿ ಪರೀಕ್ಷೆ...

3 ಹುದ್ದೆಗಳಿಗೆ ಒಂದೇ ದಿನ KPSC ಪರೀಕ್ಷೆ ನಿಗದಿ: ದಿನಾಂಕ ಬದಲಿಸಿ ಬೇರೆ ದಿನಗಳಲ್ಲಿ ಪರೀಕ್ಷೆ ನಡೆಸಲು ಸಿಎಂಗೆ ಸಚಿವ ಖರ್ಗೆ ಮನವಿ

ಬೆಂಗಳೂರು: ಒಂದೇ ದಿನ ಕೆ.ಪಿ.ಎಸ್.ಸಿ. ವತಿಯಿಂದ ಮೂರು ಪರೀಕ್ಷೆಗಳನ್ನು ನಿಗದಿಪಡಿಸಿದ್ದು, ದಿನಾಂಕ ಬದಲಾವಣೆ ಮಾಡುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಒಂದೇ ದಿನ ಮೂರು ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಕೈಗೊಳ್ಳಲಾಗಿದೆ. ಮೂರು ಪರೀಕ್ಷೆ ಬರೆಯಲು ಅರ್ಜಿ ಹಾಕಿರುವ ಪರೀಕ್ಷಾರ್ಥಿಗಳಿಗೆ ತೊಂದರೆಯಾಗಿರುವುದರಿಂದ ಮೂರು ಪರೀಕ್ಷೆಗಳನ್ನು ಬೇರೆ ದಿನಗಳಲ್ಲಿ ನಡೆಸುವಂತೆ ಆಯೋಗಕ್ಕೆ ಸೂಚಿಸುವಂತೆ ಸಿಎಂಗೆ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸೇವಾ ಆಯೋಗ ನವೆಂಬರ್ 5ರಂದು ಲೆಕ್ಕಪತ್ರ ಇಲಾಖೆಯ 242 ಲೆಕ್ಕ ಸಹಾಯಕರು, ಸಹಕಾರ ಸಂಘಗಳ 47 ನಿರೀಕ್ಷಕರು, ಪೊಲೀಸ್ ಇಲಾಖೆಯ 454 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಪರೀಕ್ಷೆ ನಿಗದಿಪಡಿಸಿದೆ. ಇದರಿಂದ ಪರೀಕ್ಷಾರ್ಥಿಗಳಲ್ಲಿ ಗೊಂದಲ ಉಂಟಾಗಿದೆ. ಕೆಲವರು ಮೂರು ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ್ದು, ಯಾವುದನ್ನು ಬರೆಯಬೇಕೆಂಬ ಗೊಂದಲದಲ್ಲಿದ್ದಾರೆ. ಹೀಗಾಗಿ ಬೇರೆ ದಿನಗಳಂದು ಪರೀಕ್ಷೆ ನಡೆಸಲು ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular