ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚಳಿ ಹೆಚ್ಚಾಗುತ್ತಲೆ ಇದೆ. ಚಳಿಯಿಂದಾಗಿ ಬೆಳಗ್ಗೆಹಾಸಿಗೆಯಿಂದ ಎದ್ದೇಳೋಕೆ ಆಗದೇ ಇರೋ ಅಷ್ಟು ಚಳಿ ಇದ್ದು, ಜನ ತತ್ತರಿಸಿ ಹೋಗ್ತಾ ಇದ್ದಾರೆ. ಇನ್ನು ಮಾರ್ನಿಂಗ್ ವಾಕ್ ಮಾಡೋವ್ರಂತೂ ಏನಪ್ಪಾ ಇದು ಚಳಿಗಾಲ ಅಂತಿದ್ದಾರೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ, ಹಾಗೆಯೇ ಒಣಹವೆ ಕೂಡ ಮುಂದುವರೆದಿದೆ. ಚಳಿ ಜತೆ ಜತೆಗೆ ಗರಿಷ್ಠ ತಾಪಮಾನದಲ್ಲಿ ಕೂಡ ಏರಿಕೆಯಾಗುತ್ತಿದೆ. ಮುಂದಿನವಾರ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೇರಿದಂತೆ ರಾಜ್ಯದ ಸಾಕಷ್ಟು ಭಾಗಗಳಲ್ಲಿ ಚಳಿ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿಯೂ ಚಳಿ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಲಿದೆ.